ದಾವಣಗೆರೆ : ದಾವಣಗೆರೆಯಲ್ಲಿ ಚಾಕೊಲೇಟ್ ನಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ರಾಜು ಅಲಿಯಾಸ್ ಪ್ಯಾರಿಲಾಲ್(40) ಬಂಧಿತ ಆರೋಪಿ. ಈತ ಹಲವು ವರ್ಷಗಳಿಂದ ಬೀಡಾ ಅಂಗಡಿ ಇಟ್ಟುಕೊಂಡಿದ್ದ ಚಾಕೊಲೇಟ್, ಇತರೆ ವಸ್ತುಗಳಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿತ್ತು, ಖಚಿತ ಮಾಹಿತಿ ಮೇರೆಗೆ ದಾವಣಗೆರೆಯ ಬಡಾವಣೆ ಪೊಲೀಸರು ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ದಾವಣಗೆರೆಯ ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ಬೀಡಾ ಅಂಗಡಿಯಲ್ಲಿ ಚಾಕೊಲೇಟ್ ನಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ,ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ಗಾಂಜಾ ಮಿಶ್ರಿತ ಚಾಕೋಲೇಟ್ ವಶಕ್ಕೆ ಪಡೆಯಲಾಗಿದೆ.