ಬೆಂಗಳೂರು : ಬೆಂಗಳೂರಿನಲ್ಲಿ ಪಿವಿಸಿ ಪೈಪ್ ನಿಂದ 9ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಸುಂಕದಕಟ್ಟೆಯ ಖಾಸಗಿ ಶಾಲೆಯಲ್ಲಿ ಪಿವಿಸಿ ಪೈಪ್ ನಿಂದ 9ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ನಡೆದಿದೆ. ಎರಡು ದಿನ ಶಾಲೆಗೆ ಬರದಿದ್ದಕ್ಕೆ ಪಿವಿಸಿ ಪೈಪ್ ನಿಂದ ಹಲ್ಲೆ ನಡೆಸಲಾಗಿದೆ.
9ನೇ ತರಗತಿ ವಿದ್ಯಾರ್ಥಿ ಎರಡು ದಿನ ಶಾಲೆಗೆ ಬಂದಿರಲಿಲ್ಲ. ಮಾರನೆ ದಿನ ಶಾಲೆಗೆ ಹೋಗುತ್ತಿದ್ದಂತೆ ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿದ್ಯಾರ್ಥಿಯನ್ನು ಪಿವಿಸಿ ಪೈಪ್ ನಿಂದ ಹೊಡೆದಿದ್ದು, ಗಂಭೀರವಾಗಿ ಹಲ್ಲೆಗೊಳಗಾಗಿರುವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ.
ಈ ಬಗ್ಗೆ ವಿದ್ಯಾರ್ಥಿಯ ತಾಯಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.