ಬೆಂಗಳೂರು : ಬೆಂಗಳೂರಿನಲ್ಲಿ ಹುಟ್ಟು ಹಬ್ಬದ ದಿನವೇ ಒಂಬತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾದನಾಯಕನಹಳ್ಳಿ ಠಾಣೆ ಪೋಲೀಸರು ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವಕ ಯತೀಶ್ 15 ವರ್ಷದ ಬಾಲಕಿಯನ್ನ ಕೇಕ್ ಕತ್ತರಿಸುವುದಾಗಿ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಕೇಕ್ ಕತ್ತರಿಸುವ ನೆಪದಲ್ಲಿ ರಾಶಿ ಲೇಔಟ್ಟೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ
ಅತ್ಯಾಚಾರ ಬಳಿಕ ಕಾಮುಕ ಎಸ್ಕೆಪ್ ಆಗಿದ್ದಾನೆ. 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಈ ಸಂಬಂಧ ಪೊಲೀಸರಿಗೆ ಪೋಷಕರು ದೂರು ನೀಡಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.








