ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 20 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ.
ಹೌದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಇದುವರೆಗು 20 ಜನ ಬಲಿಯಾಗಿದ್ದಾರೆ.