ತುಮಕೂರು : ರಾಜ್ಯದಲ್ಲಿ ಪೈಶಾಚಿಕ ಕೃತ್ಯ ಒಂದು ನಡೆದಿದ್ದು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ವಿನಯ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮತ್ತು ಯುವಕ ಅಕ್ಕಪಕ್ಕದ ಮನೆಯ ನಿವಾಸಿಗಳು. ‘ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಕೋರಿ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಕುಣಿಗಲ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.








