ಧಾರವಾಡ : ಧಾರವಾಡದಲ್ಲಿ ವಿಕೃತ ಕಾಮಿಯೊಬ್ಬ ಮಹಿಳೆಯರ ಒಳಉಡುಪು ಕದ್ದು ವಿಕೃತಿ ಮೆರೆಯುತ್ತಿದ್ದು, ಧಾರವಾಡದ ಜನತೆ ಬೆಚ್ಚಿ ಬಿದ್ದಿದ್ದಾರೆ.
ಹೌದು, ಧಾರವಾಡದ ಮಿಚಿಗನ್ ಕಾಂಪೌಂಡ್ ಬಡಾವಣೆಯಲ್ಲಿ ವಿಕೃತ ಕಾಮಿಯೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ತಡರಾತ್ರಿ ಮನೆಯ ಹಿಂದೆ ಒಣ ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ ವಿಕೃತ ಕಾಮಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.