ರಾಯಚೂರು : ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕ್ ನಲ್ಲಿ ನಾಯಿ ಮೃತದೇಹ ಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಕುಡಿಯುವ ನೀರು ಪೂರೈಕೆ ಟ್ಯಾಂಕ್ ನಲ್ಲಿ ನಾಯಿಯೊಂದು ಸತ್ತು ಬಿದ್ದಿರುವುದು ಪತ್ತೆಯಾಗಿದ್ದು, ಇದೇ ನೀರನ್ನು ಮೂರು ದಿನಗಳಿಂದ ಪೂರೈಕೆ ಮಾಡಿರುವ ಹಿನ್ನೆಲೆಯಲ್ಲಿ ತಾಲೂಕಿನ 17 ಗ್ರಾಮಗಳ ಜನರಲ್ಲಿ ಆತಂಕ ಮನೆ ಮಾಡಿದೆ.
ನೀರು ಕುಡಿದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ವಿವಿಧ ಗ್ರಾಮಗಳ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.