Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, ರಕ್ಷಣಾ ಕಾರ್ಯಾಚರಣೆ ತೀವ್ರ

ಉದ್ಯೋಗವಾರ್ತೆ : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಮೈಸೂರಲ್ಲಿ ಹಣಕ್ಕಾಗಿ ವೃದ್ಧೆ ಕೊಲೆ : ಶೌಚಾಲಯದ ಒಳಚರಂಡಿ ಗುಂಡಿಯಲ್ಲಿ ಶವ ಹೂತು ಹಾಕಿದ ಆರೋಪಿ!
KARNATAKA

SHOCKING : ಮೈಸೂರಲ್ಲಿ ಹಣಕ್ಕಾಗಿ ವೃದ್ಧೆ ಕೊಲೆ : ಶೌಚಾಲಯದ ಒಳಚರಂಡಿ ಗುಂಡಿಯಲ್ಲಿ ಶವ ಹೂತು ಹಾಕಿದ ಆರೋಪಿ!

By ಸುರೇಶ್‌

ಮೈಸೂರು : ಮೈಸೂರಲ್ಲಿ ಅಮಾನವೀಯ ಘಟನೆ ನಡೆದಿದ್ದು, ಹಣದಾಸೆಗೆ ವೃದ್ಧೆಯನ್ನು ಕೊಲೆ ಮಾಡಿ, ಶವವನ್ನು ಶೌಚಾಲಯದ ಒಳಚರಂಡಿ ಗುಂಡಿಯಲ್ಲಿ ಹಾಕಿರುವ ಘಟನೆ ಮೈಸೂರಿನ ಕೆ.ಆರ್. ನಗರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ತಿಪ್ಪೂರು ಗ್ರಾಮದ ಲೇಟ್ ಮೂಡ್ಲಶೆಟ್ಟಿ ಅವರ ಪತ್ನಿ ಗೌರಮ್ಮ (90) ಕೊಲೆಯಾದ ವೃದ್ಧೆ. ಅದೇ ಗ್ರಾಮದ ವೀರಭದ್ರ ಕೊಲೆ ಆರೋಪಿಯಾಗಿದ್ದಾನೆ ಎನ್ನಲಾಗಿದೆ.

ಕೊಲೆಯಾದ ವೃದ್ಧೆಗೆ ಮೂವರು ಗಂಡು ಮಕ್ಕಳು ಹಾಗೂ ಒರ್ವ ಪುತ್ರಿ ಇದ್ದು, ಮೂವರು ಕೂಡ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ವೃದ್ಧೆ ಗೌರಮ್ಮಳಿಗೆ ವೀರಭದ್ರ ತೀರ ಪರಿಚಿತನಾಗಿದ್ದು, ಬಹಳಷ್ಟು ವಿಶ್ವಾಸ ಗಳಿಸಿದ್ದ. ಆದ್ದರಿಂದ ಗೌರಮ್ಮ ಅವರ ಬ್ಯಾಂಕ್ ಖಾತೆಯಲ್ಲಿನ ಹಣ ಡ್ರಾ ಮಾಡುವುದು, ಇತರೆ ಕೆಲಸವನ್ನು ಮಾಡಿಕೊಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

15 ದಿನಗಳ ಹಿಂದೆ ಗೌರಮ್ಮ ವೀರಭದ್ರನ ಜೊತೆ ಬ್ಯಾಂಕ್​ಗೆ ಹೋಗಿ 75 ಸಾವಿರ ಹಣ ಡ್ರಾ ಮಾಡಿಕೊಂಡಿದ್ದರು. ಬಳಿಕ ತುರ್ತಾಗಿ ಹಣಬೇಕು ಕೊಡಿ ಎಂದು ಗೌರಮ್ಮರ ಬಳಿ ಇದ್ದ 75 ಸಾವಿರ ಹಣವನ್ನು ಆರೋಪಿ ಪಡೆದಿದ್ದ. ವಾರ ಕಳೆದ ನಂತರ ಗೌರಮ್ಮ ಹಣ ಕೊಡು ಎಂದು ಕೇಳಿದಾಗ ಕೊಡುತ್ತೇನೆ ಎಂದು ಸಬೂಬು ಹೇಳಿ ರಾತ್ರಿ ವೇಳೆ ವೃದ್ಧೆ ಮನೆಗೆ ಹೋಗಿ ಕಪಾಳಕ್ಕೆ ಹೊಡೆದು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ನಂತರ ಮೃತದೇಹವನ್ನು ಮನೆಯ ಹಿಂದೆ ಇರುವ ಶೌಚಾಲಯದ ಯುಜಿಡಿ ಗುಂಡಿಗೆ ಹಾಕಿ ಪರಾರಿಯಾಗಿದ್ದ.

ಗೌರಮ್ಮ ಕಾಣದಿರುವ ಬಗ್ಗೆ ಮಕ್ಕಳು ಹುಡುಕಾಟ ನಡೆಸಿದ್ದರು. ಇದೇ ವೇಳೆ ವೀರಭದ್ರ ಕೂಡ ಗ್ರಾಮದಿಂದ ನಾಪತ್ತೆಯಾಗಿದ್ದ‌. ಇದರಿಂದ ಅನುಮಾನಗೊಂಡ ಗೌರಮ್ಮನ ಮಕ್ಕಳು ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ವೀರಭದ್ರ ಗ್ರಾಮಕ್ಕೆ ಬಂದ ನಂತರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದರು. ಈ ವೇಳೆ ಹಣಕ್ಕಾಗಿ ಗೌರಮ್ಮ ಅವರನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು, ಶವವನ್ನು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹಾಕಿರುವುದಾಗಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ

Share. Facebook Twitter LinkedIn WhatsApp Email

Related Posts

ಉದ್ಯೋಗವಾರ್ತೆ : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

1 Min Read

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

2 Mins Read

Rain Alert : ರಾಜ್ಯದಲ್ಲಿ ಮುಂಗಾರು ಅಬ್ಬರ: ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಭಾರೀ ಮಳೆ’ ಮುನ್ನೆಚ್ಚರಿಕೆ!

1 Min Read
Recent News

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, ರಕ್ಷಣಾ ಕಾರ್ಯಾಚರಣೆ ತೀವ್ರ

ಉದ್ಯೋಗವಾರ್ತೆ : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

​ಸೈಬರ್ ವಂಚನೆಗೊಳಗಾದವರಿಗೆ ಗುಡ್ ನ್ಯೂಸ್: ‘MRM’ ಪೋರ್ಟಲ್ ಮೂಲಕ ಹಣ ವಾಪಸ್ ಪಡೆಯುವುದು ಈಗ ಸುಲಭ!

State News
KARNATAKA

ಉದ್ಯೋಗವಾರ್ತೆ : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದೀರ್ಘಕಾಲದಿಂದ ಎದುರಾಗಿರುವ ಶಿಕ್ಷಕರ ಕೊರತೆಯನ್ನು ನಿವಾರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸುಮಾರು…

BIG NEWS: 2026-27ನೇ ಸಾಲಿನ 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ

Rain Alert : ರಾಜ್ಯದಲ್ಲಿ ಮುಂಗಾರು ಅಬ್ಬರ: ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಭಾರೀ ಮಳೆ’ ಮುನ್ನೆಚ್ಚರಿಕೆ!

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.