ಬೆಂಗಳೂರು : ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಜಾಲಹಳ್ಳಿ ಬಳಿ ಸೆಪ್ಟೆಂಬರ್ 28 ರಂದು ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆಯಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ನಡೆಸಿದ್ದು, ಬಾಲಕಿಯನ್ನು ಯುವಕನೊಬ್ಬ ರಕ್ಷಿಸಿದ್ದಾನೆ.
ಇತ್ತೀಚೆಗಷ್ಟೇ ಬೀದಿನಾಯಿಗಳ ದಾಳಿಗೆ ನಿವೃತ್ತ ಶಿಕ್ಷಕಿ ಬಲಿಯಾದ ಘಟನೆ ಬೆಂಗಳೂರಿನ ಜಾಲಹಳ್ಳಿಯ ವಾಯುಸೇನಾ ನೆಲೆಯ 7ನೇ ವಸತಿಗೃಹ ಕ್ಯಾಂಪಸ್ನಲ್ಲಿ ನಡೆದಿತ್ತು. ಇದೀಗ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.