ದಕ್ಷಿಣಕನ್ನಡ : ಇತ್ತೀಚಿಗೆ ತುಮಕೂರಿನ ಲಾಡ್ಜ್ ಒಂದರಲ್ಲಿ ಪಿಎಸ್ಐ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿತ್ತು. ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೋರ್ವ PSI ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಹೌದು ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆಯ ಪಿಎಸ್ಐ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಟ್ವಾಳದ ಬಾಡಿಗೆ ಮನೆಯಲ್ಲಿ ಪಿಎಸ್ಐ ಕೀರಪ್ಪ ಆತ್ಮಹತ್ಯೆ ಶರಣಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ಕೀರಪ್ಪ ವೈಯಕ್ತಿಕ ಮತ್ತು ಹಣಕಾಸಿನ ತೊಂದರೆಯಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.