ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡಿ ಮಲಗಿದ್ದ ನಾಲ್ವರು ಕಾರ್ಮಿಕರು ಆಕ್ಸಿಜನ್ ಕೊರತೆ ಹಿನ್ನೆಲೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.. ಹುಬ್ಬಳ್ಳಿಯ ದೇಶಪಾಂಡೆ ನಗರದ ಕಟ್ಟಡ ಒಂದರಲ್ಲಿ ಈ ಒಂದು ಘಟನೆ ನಡೆದಿದೆ.
ಅಸ್ವಸ್ಥಗೊಂಡ ಬೆಂಗಳೂರು ಮೂಲದ ನಾಲ್ವರು ಕಾರ್ಮಿಕರು ಎಂದು ತಿಳಿದುಬಂದಿದೆ. ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಸದ್ಯ ನಾಲ್ವರು ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ನಾಲ್ವರನ್ನು ಜಾಫರ್, ಅಮ್ಜದ್, ಜಬಿ ಹಾಗೂ ಹೈದರ್ ಎಂದು ತಿಳಿದು ಬಂದಿದೆ.








