ರಾಮನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು ರಾಮನಗರದಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ರಾಮನಗರದ ಮಾಗಡಿ ಪೊಲೀಸರಿಂದ ಇದೀಗ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ವಿಕಾಸ್ ಪ್ರಶಾಂತ್ ಮತ್ತು ಚೇತನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು. ಪ್ರೀತಿಯ ನೆನಪಲ್ಲಿ ವಿಕಾಸ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದಾನೆ ನಂತರ ಯುವತಿಯ ಜೊತೆಗೆ ಲೈಂಗಿಕ ಸಂಪರ್ಕ ಕೂಡ ಬೆಳೆಸಿದ್ದಾರೆ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ವಿಕಾಸ್ ಬೆದರಿಕೆ ಹಾಕಿದ್ದಾನೆ. ನಾನು ಕರೆದಾಗೆಲ್ಲ ಬರಬೇಕು ಅಂತ ಬೆದರಿಕೆ ಹಾಕಿದ್ದಾನೆ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿದ್ದಾನೆ.
ಆನಂತರ ಪ್ರಶಾಂತ್ ಚೇತನ್ ಜೊತೆಗೆ ಸೇರಿಸಿಕೊಂಡು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎನ್ನುವ ಆರೋಪ ಕೇಳಿ ಬಂದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ನೆನ್ನೆ ರಾಮನಗರದ ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ, ವಿದ್ಯಾರ್ಥಿನಿಯ ದೂರಿನ ಅನ್ವಯ ಇದೀಗ ಪೊಲೀಸರು ವಿಕಾಸ್ ಪ್ರಶಾಂತ್ ಮತ್ತು ಚೇತನ್ ಅನ್ನು ಅರೆಸ್ಟ್ ಮಾಡಿದ್ದಾರೆ.








