ಚನ್ನಪಟ್ಟಣ : ಕೆಲಸದ ಒತ್ತಡಕ್ಕೆ ಬೇಸತ್ತು ವಿಷ ಕುಡಿದು ಮುಖ್ಯ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕುವೆಂಪು ಬಡಾವಣೆಯಲ್ಲಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಎಲೆತೋಟದಳ್ಳಿಯ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಸುಖೇಂದ್ರ (58) ಮೃತ ಶಿಕ್ಷಕ. ಶಾಲೆಯಲ್ಲಿ ಎಲ್ಲಾ ಕಾರ್ಯವನ್ನು ನಿಗದಿತ ಸಮಯಕ್ಕೆ ಮುಗಿಸಬೇಕೆಂದು ಇಲಾಖೆಯಿಂದ ಒತ್ತಡ ಇತ್ತು ಎನ್ನಲಾಗಿದೆ. ಒತ್ತಡವಿದ್ದರಿಂದಲೇ ನಮ್ಮ ತಂದೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ಹೇಮಂತ್ ದೂರು ನೀಡಿದ್ದಾರೆ.
ಸುಖೇಂದ್ರ ಅವರು ಕೆಲಸದ ಒತ್ತಡಕ್ಕೆ ಬೇಸತ್ತು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.