ಚಾಮರಾಜನಗರ : ರಾಜ್ಯದಲ್ಲಿ ಹೃದಯಘಾತದಿಂದ ಸರಣಿ ಸಾವುಗಳು ಸಂಭವಿಸುತ್ತಲೇ ಇವೆ. ಇದೀಗ ಚಾಮರಾಜನಗರದಲ್ಲಿ ಭಾರಿ ದುರಂತ ಒಂದು ತಪ್ಪಿದ್ದು ಖಾಸಗಿ ಬಸ್ ಚಾಲನೆ ಮಾಡುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಹೃದಯಘಾತವಾಗಿದೆ. ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದು ಆತನನ್ನು ಚಾಮರಾಜನಗರಕ್ಕೆ ಕರೆತರುವಷ್ಟ್ರಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಬಸ್ ಚಲಾಯಿಸುವಾಗಲೇ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಖಾಸಗಿ ಬಸ್ ಚಾಲಕ ಇದೀಗ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತ ಚಾಲಕನನ್ನು ಆರ್ ಪಿಕೆ ಖಾಸಗಿ ಬಸ್ ಚಾಲಕ ಗುರುಸಿದ್ಧ (55) ಎಂದು ತಿಳಿದುಬಂದಿದೆ. ಕೊಳ್ಳೇಗಾಲದಿಂದ ಚಾಮರಾಜನಗರಕ್ಕೆ ಖಾಸಗಿ ಬಸ್ ತೆರಳುತ್ತಿತ್ತು. ಬಸ್ ಚಾಲನೆ ಮಾಡುತ್ತಿದ್ದಾಗ ಏಕಾಏಕಿ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕರೆತರುತಿದ್ದಾಗ ಮಾರ್ಗ ಮಧ್ಯೆ ಚಾಲಕ ಸಾವನ್ನಪ್ಪಿದ್ದಾನೆ.