ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು,ಇಂದು ಒಂದೇ ದಿನ ನಾಲ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಗೂಡ್ಸ್ ವಾಹನ ಚಾಲಕ ಸಾವು
ಬೆಳಗಾವಿ ಜಿಲ್ಲೆಯ ಸೌದತ್ತಿ ಪಟ್ಟಣದ ಎಪಿಎಂಸಿಯಲ್ಲಿ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಅಶೋಕ್ ಜೀರಿಗವಾಡ (40) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ಅಶೋಕ್ ಸೌದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸೌದತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಅಶೋಕ್ ಹೆಸರು ಕಾಳು ತಂದಿದ್ದರು. ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದು ಚಾಲಕ ಅಶೋಕ್ ಸಾವನಪ್ಪಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆಯಲ್ಲಿ 22 ವರ್ಷದ ಯುವಕ ಸಾವು
ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಮೃತಪಟ್ಟವರು.ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಕನಕಪುರದಲ್ಲಿ 38 ವರ್ಷದ ವ್ಯಕ್ತಿ ಸಾವು
ಕನಕಪುರ ತಾಲೂಕಿನ ಕೊಗ್ಗೆ ದೊಡ್ಡಿ ಗ್ರಾಮದ 38 ವರ್ಷದ ಮಾದೇಶ್ ನಾಯ್ಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಾದೇಶ್ ನಾಯ್ಕ್ ಫಾರೆಸ್ಟ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.
ಧಾರವಾಡದಲ್ಲಿ ಯುವತಿ ಸಾವು
ಧಾರವಾಡದಲ್ಲಿ 25 ವರ್ಷದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪುರೋಹಿತ ನಗರದ ಜೀವಿತಾ ಕುಸಗೂರು ಸಾವನ್ನಪ್ಪಿದ್ದಾರೆ.