ಮಂಡ್ಯ : ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಪತಿಯ ಸಾವಿನಿಂದ ಮನನೊಂದ ಪತ್ನಿ ಒಬ್ಬರು ಪತಿಯ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅತ್ತಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗೀತಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿಯ ಸಾವಿನಿಂದ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಗೀತಾ ಪತಿ ರಾಜು ಅನಾರೋಗ್ಯದಿಂದ ಮೃತಪಟ್ಟಿದ್ರು. ಪತಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದು ಪತ್ನಿ ಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 6 ತಿಂಗಳ ಹಿಂದೆಯಷ್ಟೆ ಕಿರಿಯ ಮಗ ಅಪಘಾತದಲ್ಲಿ ಮೃತಪಟ್ಟಿದ್ದ. ಇದೀಗ ತಂದೆ ತಾಯಿ ಸಾವಿನಿಂದ ಹಿರಿ ಮಗ ಅನಾಥನಾಗಿದ್ದಾನೆ. ಪತಿ ಪತ್ನಿ ಸಾವಿನಿಂದ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.








