ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರೆದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಮೃತ ಮಗಳು. ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡ್ತಿದ್ದ ಸ್ವರ್ಣ ಕಾಲೇಜಿನ ಹಾಸ್ಟೆಲ್ನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಮನೆಗೆ ಬಂದಿದ್ದ ಮಗಳನ್ನ ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಳು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮಗಳು ಸ್ವರ್ಣ ಸಾವನ್ನಪ್ಪಿದ್ದಾಳೆ.
ಸ್ವರ್ಣಳ ತಂದೆ ಕಳೆದ 3 ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಅಂದಿನಿಂದಲೂ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಸ್ವರ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.