ತುಮಕೂರು : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಇಬ್ಬರು ವಿಶೇಷ ಚೇತನ ಮಕ್ಕಳನ್ನು ಕೊಲೆ ಮಾಡಿ ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ದಿವ್ಯಾಂಗ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮಿ(45), ಮಗಳು ಚೂಡಾಮಣಿ(23), ಪುತ್ರ ನರಸಿಂಹರಾಜು(14) ಆತ್ಮಹತ್ಯೆ ಮಾಡಿಕೊಂಡವರು.
ಪತಿ ಮಹಾದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ವಿಜಯಲಕ್ಷ್ಮಿ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.