ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ನಿಂದ ಬಿದ್ದು ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದ್ದು, ನೆಲಮಂಗಲದ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ಅಲ್ಲಿ ಈ ಒಂದು ಘಟನೆ ಸಂಭವಿಸಿದೆ. ಅಪಾರ್ಟ್ಮೆಂಟ್ನ 24ನೇ ಮಹಡಿಯಿಂದ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರೆಸ್ಟೀಜ್ ಅಪಾರ್ಟ್ಮೆಂಟ್ ನಿಂದ ಬಿದ್ದು ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಎರಡು ದಿನಗಳ ಹಿಂದೆ ಲೋಕೇಶ್ ಅಕ್ಕನ ಭಾವನ ಮನೆಗೆ ಬಂದಿದ್ದ. ಅಕ್ಕ ಭಾವ ಮನೆಯಲ್ಲಿ ಇಲ್ಲದ ವೇಳೆ ಲೋಕೇಶ್ ಆತ್ಮಹತ್ಯೆ ಶರಣಾಗಿದ್ದಾನೆ. ಎರಡು ದಿನ ಮನೆಯಲ್ಲಿದ್ದು ಮೂರನೇ ದಿನ ಲೋಕೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಪಾರ್ಟ್ಮೆಂಟ್ನಿಂದ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲೂ ಸಹ ಸೆರೆಯಾಗಿದೆ. ಅನಾರೋಗ್ಯದ ಹಿನ್ನೆಲೆ ಲೋಕೇಶ್ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗುತ್ತಿದೆ.
ಈತ ಖಾಸಗಿ ಮಾಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಇನ್ನೊಂದು ಕಡೆ ಅನಾರೋಗ್ಯದ ಸಮಸ್ಯೆ ಕಾಡುತ್ತಿತ್ತು. ಹಾಗಾಗಿ ಲೋಕೇಶ್ ಅಕ್ಕನ ಮನೆಗೆ ಬಂದು ಎರಡು ದಿನಗಳ ಕಾಲ ಇದ್ದ ಬಹಳ ಖಿನ್ನತೆಗೆ ಒಳಗಾಗಿದ್ದ.ಲೋಕೇಶ್ ಮೂರನೇ ದಿನ ನಸುಕಿನ 3 ಗಂಟೆಗೆ ಅಪಾರ್ಟ್ಮೆಂಟ್ ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಯುಡಿಆರ್ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತೆ.