ಮಂಗಳೂರು : ಮಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಬಾಣಂತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಾರ್ಕಳದ ರಂಜಿತಾ ಆಚಾರ್ಯ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಂಜಿತಾ ಅವರಿಗೆ ಅವಧಿಪೂರ್ವ ಪ್ರಸವವಾಗಿತ್ತು. ಅ.30ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಎನ್ ಐಸಿಯುವಿನಲ್ಲಿ ಆರೈಕೆಯಲ್ಲಿದ್ದ ಶಿಶು ನ.3ರಂದು ಮೃತಪಟ್ಟಿತ್ತು.
ಇಂದು ರಂಜಿತಾ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಬೇಕಾಗಿತ್ತು. ಆದರೆ ರಂಜಿತಾ ಅವರು ಇಂದು ಆಸ್ಪತ್ರೆ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.