ಮೈಸೂರು : ಮೈಸೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನೀಡದ ಹಿನ್ನೆಲೆಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು ನಗರದ ಸರಸ್ವತಿಪುರಂನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ(46) ಪತ್ತೆಯಾಗಿದ್ದಾರೆ. ಸಂಧ್ಯಾ ಅವರನ್ನು ಕೊಲೆ ಮಾಡಲಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
25 ವರ್ಷಗಳ ಹಿಂದೆ ಬೆಂಗಳೂರು ಮೂಲದ ಸಂಧ್ಯಾ ಚಾಮರಾಜನಗರ ಜಿಲ್ಲೆಯ ರಂಗನಾಥ್ ಅವರನ್ನು ಮದುವೆಯಾಗಿದ್ದರು. ಸಂಧ್ಯಾ -ರಂಗನಾಥ್ ದಂಪತಿಗೆ ಪುತ್ರ, ಪುತ್ರಿ ಇದ್ದಾರೆ. ಮಗಳು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪತಿ ಮತ್ತು ಪುತ್ರನ ಜತೆ ಸಂಧ್ಯಾ ಮೈಸೂರಿನಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ ಪ್ರವಾಸದ ವಿಚಾರದಲ್ಲಿ ದಂಪತಿಯ ನಡುವೆ ಜಗಳವಾಗಿದೆ. ಪತಿ ಮನೆಯಿಂದ ಹೊರ ಹೋಗಿದ್ದಾಗ ಪತ್ನಿ ಸಂಧ್ಯಾ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಅಕ್ಕನ ಸಾವಿನ ಬಗ್ಗೆ ಸಹೋದರ ಅನುಮಾನ ವ್ಯಕ್ತಪಡಿಸಿದ್ದು. ಈ ಬಗ್ಗೆ ಸಹೋದರ ಗುರುಮೂರ್ತಿ ದೂರು ನೀಡಿದ್ದಾರೆ. ಸರಸ್ವತಿಪುಪರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








