ರಾಯಚೂರು : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ರಾಯಚೂರಿನಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮಳೆಗೆ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಜಮೀನಿನಲ್ಲಿ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ದೇವಕಿ ಮ್ಯಾಗೇರಿ (40) ಸಾವನ್ನಪ್ಪಿದ್ದಾರೆ.
ಮಳೆ ನಿಂತ ನಂತರ ಗ್ರಾಮಸ್ಥರು ಸ್ಥಳಕ್ಕೆ ಓಡಿ ಹೋಗಿ ನೋಡಿದಾಗ ಸಿಡಿಲು ಬಡಿದು ದೇವಕಿ ಮೃತಪಟ್ಟಿರುವುದು ತಿಳಿದುಬಂದಿದೆ.