ವಿಜಯಪುರ : ವಿಜಯಪುರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಚರಂಡಿಗೆ ಬಿದ್ದು ಎರಡು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ನಗರದ ಜೆಎಂ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು, ಯಾಸೀನ್ ಸದ್ದಾಂ ಮುಲ್ಲಾ (2) ಮೃತ ಮಗು ಎಂದು ಗುರುತಿಸಲಾಗಿದೆ. ಕಳೆದ ಹಲವು ದಿನಗಳ ಹಿಂದೆ ಭಾರೀ ಮಳೆ ಹಿನ್ನೆಲೆಯಲ್ಲಿ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು. ಬಳಿಕ ಮಹಾನಗರ ಪಾಲಿಕೆಯಿಂದ ಚರಂಡಿ ಮೇಲಿನ ಕಲ್ಲು ಬಂದ್ ಮಾಡಿರಲಿಲ್ಲ. ಆದ್ದರಿಂದ ಇಂದು ಚರಂಡಿಯಲ್ಲಿ ಎರಡು ವರ್ಷದ ಮಗು ಬಿದ್ದು ಸಾವನ್ನಪ್ಪಿದ್ದು, ಪಾಲಿಕೆ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಗರ ಪಾಲಿಕೆಯ ವಿರುದ್ಧ ಸ್ಥಳೀಯರು ಮತ್ತು ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತಪಡಿಸಿದ್ದು, ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.