ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಮೊಹರಂ ಆಚರಣೆ ವೇಳೆ ದುರಂತವೊಂದು ಸಂಭವಿಸಿದೆ. ಬೆಂಕಿಯಲ್ಲಿ ಬಿದ್ದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಯರಗುಂಟಿಯಲ್ಲಿ ಅಲಾವಿ ಕುಣಿಯಲ್ಲಿ ಬಿದ್ದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯರಗುಂಟಿ ಗ್ರಾಮದ ಹನುಮಂತ ಗಾಯಗೊಂಡಿದ್ದಾರೆ.
ಮೊಹರಂ ಹಬ್ಬದ ಪ್ರಯುಕ್ತ ಗ್ರಾಮದಲ್ಲಿ ದೊಡ್ಡ ಅಗ್ನಿಕುಂಡ ಸಿದ್ಧಪಡಿಸಿದ್ದು, ಅದನ್ನು ಹಾಯ್ದು ಹೋಗುವಾಗ ಕಟ್ಟಿಗೆಯಲ್ಲಿ ಕಾಲು ಸಿಲುಕಿಕೊಂಡು ದುರ್ಘಟನೆ ಸಂಭವಿಸಿದೆ. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಿಂಗಸುಗೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.