ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ನಡೆದಿದ್ದು, ವಿದ್ಯುತ್ ತಂತಿ ಹಿಡಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗೇಟಲ್ಲಿ ನಡೆದಿದೆ.
ಪದಂ (25) ಎನ್ನುವ ಯುವಕ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ಡಾಬಾದಲ್ಲಿ ಪದಂ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಪೆಟ್ಟಿಗೆ ಅಂಗಡಿಯ ಮೇಲೆ ಹತ್ತಿ ವಿದ್ಯುತ್ ತಂತಿ ಹಿಡಿದು ಪದಂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡ ದೃಶ್ಯ ಇದೀಗ ವೈರಲ್ ಆಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದಾರೆ.