ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಈ ಒಂದು ಶೈಕ್ಷಣಿಕ ಸಮೀಕ್ಷೆಗೆ ಸರ್ಕಾರಿ ಶಾಲೆಯ ಶಿಕ್ಷಕರನ್ನು ನೇಮಿಸಲಾಗಿದೆ. ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಸಮೀಕ್ಷೆ ನಡೆಸುವಾಗಲೇ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಹೆಚ್. ಎಂ ರಾಮಕೃಷ್ಣಪ್ಪ (57) ಎನ್ನುವ ಮುಖ್ಯ ಶಿಕ್ಷಕ ಸಾವನ್ನಪ್ಪಿದ್ದಾರೆ. ರಾಮಕೃಷ್ಣಪ್ಪ ಅವರು ದಿಗಬಕೋಟೆ ಗ್ರಾಮದ ಶಾಲೆಯ ಮುಖ್ಯ ಶಿಕ್ಷಕರಾಗಿದ್ದಾರೆ. ಚಿಂತಾಮಣಿಯ 25ನೇ ವಾರ್ಡ್ನಲ್ಲಿ ಸಮೀಕ್ಷೆ ವೇಳೆ ಅವರಿಗೆ ಏಕಾಏಕಿ ಹೃದಯಾಘಾತ ಆಗಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರು, ಚಿಕಿತ್ಸೆ ಫಲಿಸದೇ ಹೆಚ್ ಎಂ ರಾಮಕೃಷ್ಣಪ್ಪ ಸಾವನಪ್ಪಿದ್ದಾರೆ. ಕೆಲಸದ ಒತ್ತಡದಿಂದ ಹೃದಯಘಾತವಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.