ಧಾರವಾಡ : ಧಾರವಾಡದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಧಾರವಾಡದ ಕೊಪ್ಪದಕೇರಿ ಬಡಾವಣೆಯ ಪಾರ್ಕ್ ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಪಾರ್ಕ್ ನಲ್ಲಿ ಇರುವಂತಹ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








