ನಂಜನಗೂಡು : ನಂಜನಗೂಡಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ.
ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ (13) ಲೋ ಬಿಪಿಯಿಂದ ಮೃತಪಟ್ಟ ಬಾಲಕ.
ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಮಹಾಂತೇಶ್ ನನ್ನು ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.