ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ತನ್ನ ಮೂರು ವರ್ಷದ ಸೋದರ ಸೊಸೆಯನ್ನು ಕೊಂದು ಶವವನ್ನು ವಿಲೇವಾರಿ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಥಾಣೆಯ ಪ್ರೇಮ್ ನಗರದಲ್ಲಿರುವ ತನ್ನ ಮನೆಯಿಂದ ಬಾಲಕಿ ನವೆಂಬರ್ 18ರಂದು ಕಾಣೆಯಾಗಿದ್ದಳು. “ಅವಳು ಕಾಣೆಯಾದ ನಂತರ, ತಾಯಿಯ ದೂರಿನ ಮೇರೆಗೆ ಅಪಹರಣ ಪ್ರಕರಣ ದಾಖಲಿಸಲಾಗಿದೆ. ಹಿಲ್ ಲೈನ್ ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಪೊಲೀಸ್ ಆಯುಕ್ತ (ವಲಯ 4) ಸಚಿನ್ ಗೋರೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪೊಲೀಸರು ಮಗುವಿನ ಸೋದರ ಮಾವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ವರದಿ ಪ್ರಕಾರ, 30ರ ಹರೆಯದ ಆರೋಪಿ ಅಪರಾಧವನ್ನ ಒಪ್ಪಿಕೊಂಡಿದ್ದಾನೆ ಆದರೆ ತಾನು ಮಗುವನ್ನ ಉದ್ದೇಶಪೂರ್ವಕವಾಗಿ ಕೊಂದಿಲ್ಲ ಎಂದು ಹೇಳಿಕೊಂಡಿದ್ದಾನೆ. ಆರೋಪಿಯು “ಅವಳೊಂದಿಗೆ ಆಟವಾಡುತ್ತಿದ್ದಾಗ ತಮಾಷೆಯಾಗಿ ಕಪಾಳಕ್ಕೆ ಹೊಡೆದಿದ್ದು, ಮಗು ಅಡುಗೆಮನೆಯ ಸ್ಲ್ಯಾಬ್ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಆತ ಹೆದರಿ ಮಗುವಿನ ಶವವನ್ನ ಮುಂಬೈನ ಉಲ್ಹಾಸ್ ನಗರದ ಬಳಿಯ ಪೊದೆಗಳಲ್ಲಿ ಎಸೆದಿದ್ದಾನೆ. ಸಧ್ಯ ಪೊಲೀಸರು ಶವವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
BREAKING : ಬೆಂಗಳೂರಲ್ಲಿ ಸಿಸಿಬಿ ಮತ್ತೊಂದು ಕಾರ್ಯಾಚರಣೆ : ಇಬ್ಬರು ವಿದೇಶಿ ಪೆಡ್ಲರ್ ಗಳ ಬಂಧನ
‘ಕನ್ನಡ ಬರಲ್ಲ’ ಅಂತ ಟ್ರೊಲ್ ಮಾಡ್ತೀರಾ? ಇಂತದಕ್ಕೆಲ್ಲ ಹೆದರುವ ಪ್ರಶ್ನೆಯೇ ಇಲ್ಲ : ಸಚಿವ ಮಧು ಬಂಗಾರಪ್ಪ