ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾಲ್ಕು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ತಮಿಳುನಾಡಿನ ತಿರುವಣ್ಣಾಮಲೈಯಲ್ಲಿ ನಡೆದಿದೆ.
ಪಳನಿಸ್ವಾಮಿ ಎಂಬಾತ ಈ ಕೃತ್ಯ ಎಸಗಿದ್ದು, ತನ್ನ ಪತ್ನಿ ಶ್ರೀವಲ್ಲಿ (37) ಮಕ್ಕಳಾದ ಮೋನಿಶಾ (14) ತ್ರಿಶಾ (15) ಶಿವಶಕ್ತಿ (6) ಧನುಷ್ (4) ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ಇನ್ನೂ ಭೂಮಿಕಾ (9) ಎಂಬಾಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಸೋಮವಾರ ರಾತ್ರಿ ತಮಿಳುನಾಡಿನ ತಿರುವಣ್ಣಾಮಲೈ ಸಮೀಪದ ಓರಂತವಾಡು ಗ್ರಾಮದಲ್ಲಿ ಘಟನೆ ನಡೆದಿದೆ. ಈ ಸಂಬಂಧ ತಿರುವಣ್ಣಾಮಲೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BIG NEWS : ಉತ್ತರ ಪ್ರದೇಶ : ಶಾಲಾ ಬಸ್ ಹಳ್ಳಕ್ಕೆ ಬಿದ್ದು10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ| School Bus Falls
ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ – ಸಿಎಂ ಬಸವರಾಜ ಬೊಮ್ಮಾಯಿ | Mahadayi Water Dispute