ಬೆಂಗಳೂರು : ಇತ್ತೀಚಿಗೆ ಎಲ್ಲೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೆ.ಆರ್ ಪುರಂ ನ ಸೊನ್ನೆನಹಳ್ಳಿಯಲ್ಲಿ ರಸ್ತೆಯಲ್ಲಿ ಆಟವಾಡುವಾಗ ಬಾಲಕನ ಮೇಲೆ 6 ಬೀದಿ ನಾಯಿಗಳು ದಾಳಿ ಮಾಡಿವೆ. ಕೂಡಲೇ ಬಾಲಕ ಜೋರಾಗಿ ಕಿರುಚಿಕೊಂಡಿದ್ದು ಸ್ಥಳೀಯರು ಓಡಿ ಬಂದ ಕಾರಣ ಅನಾಹುತ ತಪ್ಪಿದೆ.
ಆಟವಾಡುತ್ತಿದ್ದ ಬಾಲಕನ ಮೇಲೆ ಆರು ಬೀದಿ ನಾಯಿಗಳು ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಬಾಲಕ ಪಾರಾಗಿದ್ದಾನೆ. ಬೀದಿ ನಾಯಿಗಳ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.