ತುಮಕೂರು : ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಯ ಮೆಟ್ಟಿಲು ಏರಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕ್ಷೇತ್ರ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ.
ಹೌದು ಪಾವಗಡದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾನೆ. ಗೃಹ ಸಚಿವ ಜಿ. ಪರಮೇಶ್ವರ್ ಅವರ ಜಿಲ್ಲೆಯಲ್ಲಿಯೇ ಇಂತಹ ಘಟನೆ ನಡೆದಿದ್ದು, ಇದು ಇಡೀ ಪೊಲೀಸ್ ಇಲಾಖೆಯ ತಲೆ ತಗ್ಗಿಸುವಂತಹ ಘಟನೆಯಾಗಿದೆ.
ಡಿವೈಎಸ್ಪಿ ಕಚೇರಿಗೆ ಮಹಿಳೆಯ ಜೊತೆ ಆಗಮಿಸಿದ್ದ ಅನಿಲ್ ಎಂಬಾತನು ವಿಡಿಯೋ ಸೆರೆ ಹಿಡಿದಿದ್ದಾರೆ ಎಂದು ಶಂಕಿಸಲಾಗಿದೆ. ಬಳಿಕ, ಬಳಿಕ ವಾಟ್ಸ್‌ಅಪ್ ಮೂಲಕ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು, ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ.