ಮೈಸೂರು : ರಾಜ್ಯದಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ರಾಜೇಗೌಡನ ಹುಂಡಿ ಎಂಬ ಗ್ರಾಮದಲ್ಲಿ ಚರಂಡಿಯಲ್ಲಿ ಯಾರೋ ಪಾಪಿಗಳು ನವಜಾತ ಶಿಶುವನ್ನು ಬಿಸಾಡಿ ಹೋಗಿದ್ದಾರೆ. ಅದೃಷ್ಟವಶಾತ್ ತಕ್ಷಣ ಸ್ಥಳೀಯರು ಶಿಶುವನ್ನು ರಕ್ಷಣೆ ಮಾಡಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ಹೌದು ಇಂದು ಮುಂಜಾನೆ ಗ್ರಾಮಸ್ಥರು ತಮ್ಮ ಹೊಲಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು ಅಳುವ ಶಬ್ಧ ಕೇಳಿಸಿದೆ. ಕೂಡಲೇ ಗ್ರಾಮಸ್ಥರು ಸ್ಥಳೀಯ ಆಶಾ ಕಾರ್ಯಕರ್ತರಿಗೆ ಈ ವಿಚಾರ ತಿಳಿಸಿದ್ದಾರೆ. ತಕ್ಷಣ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಥಳಕ್ಕೆ ಬಂದು ಮಗುವನ್ನ ಹೆಚ್. ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.