ಚಿಕ್ಕಮಗಳೂರು : ರಾಜ್ಯದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಬಾಯ್ಲರ್ ರಿಪೇರಿ ಮಾಡುವಾಗ ಕಾರ್ಮಿಕನೊಬ್ಬ ಶಾಕಕ್ಕೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಹೌದು ಬಾಯ್ಲರ್ ರಿಪೇರಿ ಮಾಡುವಾಗ ಕಾರ್ಮಿಕ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರಿನ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬಾಯ್ಲರ್ ನ ಭಾರಿ ಪ್ರಮಾಣದ ಶಾಖದಿಂದ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಬಾಯ್ಲರ್ ಶಾಖಕ್ಕೆ ಕಾರ್ಮಿಕ ಸುಟ್ಟು ಕರಕಲಾಗಿದ್ದಾನೆ.
ಕೊಡಗು ಜಿಲ್ಲೆಯ ಉದಯ್ (27) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಘಟನೆ ಕುರಿತಂತೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.