ರಾಯಚೂರು : ವಿವಾಹಿತ ಮಹಿಳೆ ಮೇಲೆ ನಾಲ್ವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ ಘಟನೆ ಸಿಂಧನೂರಿನಲ್ಲಿ ನಡೆದಿದೆ.
ತಾಲೂಕಿನ ಏಳಮೈಲ್ ಕ್ಯಾಂಪಿನ ನಿವಾಸಿ ಮೇಲೆ ಅತ್ಯಾಚಾರ ನಡೆದಿದ್ದು, 5 ಗಂಟೆ ಸುಮಾರಿಗೆ ನಾಲ್ಕುಮೈಲ್ ಕ್ಯಾಂಪಿನ ಹೊರವಲಯದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.
ಗಂಭೀರವಾಗಿ ಹಲ್ಲೆ ನಡೆಸಿದ ಪರಿಣಾಮ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾಳೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ವಾಹನ ಸವಾರರೇ ಗಮನಿಸಿ : ಇಂದು 24 ನೂತನ ಸಚಿವರ ಪ್ರಮಾಣವಚನ, ರಾಜಭವನದ ಸುತ್ತಮುತ್ತ ಮಾರ್ಗ ಬದಲಾವಣೆ