ಬಳ್ಳಾರಿ : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವನ್ನಪ್ಪಿದ್ದು, ಈ ಮೂಲಕ ಕಳೆದ 25 ದಿನಗಳಲ್ಲಿ ಐದನೇ ಸಾವಿನ ಪ್ರಕರಣ ದಾಖಲಾಗಿದೆ.
ಗುರುವಾರ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಂದು ಬಾಣಂತಿಯ ಸಾವು ಸಂಭವಿಸಿದೆ. ಕೂಡ್ಲಗಿ ಪಟ್ಟಣದ ಸುಮಯ್ಯ (24) ಎಂಬುವರು ಜಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ನಿತ್ಯ ಡಯಾಲಿಸಸ್ ಮಾಡಲಾಗುತ್ತಿತ್ತು. ಗುರುವಾರ ತೀವ್ರ ತೊಂದರೆಯಿಂದ ಸಾವನ್ನಪ್ಪಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನವೆಂಬರ್ 10 ರಂದು ಏಳು ಬಾಣಂತಿಯರ ಹೆರಿಗೆಯಾಗಿತ್ತು. ಇದರಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಬಾಣಂತಿ ಸಾವನ್ನಪ್ಪಿದ್ದಾರೆ.