ಬೆಂಗಳೂರು : ಇಂದಿನ ದಿನಮಾನಗಳಲ್ಲಿ ಯುವಕರಲ್ಲೇ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಬಸವೇಶ್ವರನಗರದಲ್ಲಿ ಕೆ.ಆರ್.ಅಭಿಷೇಕ್ ಎಂಬ ಯುವಕ ಸಾವನಪ್ಪಿದ್ದಾನೆ. ಮೂಲತಃ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನವ ಎಂದು ತಿಳಿದುಬಂದಿದೆ.
ಅನಸೂಯ ರಾಮಕೃಷ್ಣ ದಂಪತಿ ಪುತ್ರ ಕೆ.ಆರ್ ಅಭಿಷೇಕ್ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ. ಅರಕಲಗೂಡು ತಾಲೂಕಿನ ಕಾಡನೂರಿನ ನಿವಾಸಿ ಎಂದು ತಿಳಿದುಬಂದಿದೆ. ಅಭಿಷೇಕ್, ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬಸವೇಶ್ವರ ನಗರದಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಅಭಿಷೇಕ್ ಸಾವನ್ನಪ್ಪಿದ್ದಾನೆ. ತಕ್ಷಣ ಅಭಿಷೇಕ್ ನನ್ನು ಸ್ಥಳಿಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅಭಿಷೇಕ್ ಮೃತಪಟ್ಟಿದ್ದಾನೆ.