ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಜೀವಂತ ಗಂಡುಮಗುವನ್ನು ನಿರ್ಜನ ಪ್ರದೇಶದಲ್ಲಿ ಹೂತು ಹಾಕಿರುವ ಘಟನೆ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನ ಕತ್ರಿಗುಪ್ಪೆ ದಿಣ್ಣೆ ಬಳಿ ಒಂದು ದಿನದ ಗಂಡು ಮಗುವನ್ನು ಜೀವಂತವಾಗು ಮಣ್ಣಿನಲ್ಲಿ ಪಾಪಿಗಳು ಹೂತು ಹಾಕಿದ್ದಾರೆ. ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಕೂಡಲೇ ಮಗುವನ್ನು ರಕ್ಷಿಸಿದ್ದಾರೆ.
ಸ್ಥಳೀಯರು ಮಗುವನ್ನು ರಕ್ಷಿಸಿ ದೊಮ್ಮಸಂದ್ರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.