ದಾವಣಗೆರೆ : ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ ನಡೆಸಲಾಗಿದೆ. ನಡು ರಸ್ತೆಯಲ್ಲಿಯೇ ಮಹಿಳೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ.
ತಾವರೆಕೆರೆ ಗ್ರಾಮದಲ್ಲಿ ಏಪ್ರಿಲ್ 9ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಸ್ರೀನ್ ಬಾನು, ನಸ್ರಿನ್ ಮತ್ತು ಫಯಾಜ್ ಎನ್ನುವವರ ಮೇಲೆ ಹಲ್ಲೆ ನಡೆಸಲಾಗಿದೆ. ಮಹಿಳೆ ಮೇಲೆ ಹಗ್ಗ ಮತ್ತು ದೊಣ್ಣೆ ಕಬ್ಬಿಣದ ಪೈಪ್ ಗಳಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಮೊಹಮ್ಮದ್ ಫಯಾಜ್ ಎನ್ನುವ ವ್ಯಕ್ತಿಯಿಂದ ಮಹಿಳೆಯ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.
ಮಹಮ್ಮದ್ ಗೌಸ್ ಪೀರ್, ಚಾಂದ್ ಪೀರ್, ದಸ್ತಗಿರ್ ಇನಾಯತ್ ಉಲ್ಲಾ, ರಸೂಲ್ ಟಿ ಆರ್ ನಿಂದ ಮಹಿಳೆಯ ಮೇಲೆ ಹಲ್ಲೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಮಹಿಳೆಯ ಮೇಲೆ ಹಲ್ಲೆ ಮಾಡುವ ದೃಶ್ಯ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.