ಕಲಬುರ್ಗಿ : ಇತ್ತೀಚಿಗೆ ವಯಸ್ಸಿನ ಅಂತರವಿಲ್ಲದೆ ಪ್ರತಿಯೊಬ್ಬರಿಗೂ ಈ ಹೃದಯಾಘಾತ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಯುವಜನತೆ ಅಂತೂ ಈ ಒಂದು ಹೃದಯಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಕಲ್ಬುರ್ಗಿಯಲ್ಲಿ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಲೇ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ್ದಾನೆ.
ತಾಲ್ಲೂಕಿನ ಹತಗುಂದಾ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕ ಕುಸಿದುಬಿದ್ದು ಮೃತಪಟ್ಟಿದ್ದಾನೆ.ಯಳವಂತಗಿ (ಕೆ) ಗ್ರಾಮದ ನಿವಾಸಿ ಸಚಿನ್ ಪರಮೇಶ್ವರ ಮಾನೆ (22) ಮೃತ ಯುವಕ. ಘಟನೆ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.