ಕಲಬುರಗಿ : ಕೋರ್ಟ್ ಗೆ ಹೋಗುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಕಲಬುರಗಿಯ 3ನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಧೀಶ ವಿಶ್ವನಾಥ ಮುಗುತಿ (44) ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ರಬಕವಿ, ಬನಹಟ್ಟಿ ಮೂಲದ ನ್ಯಾ.ವಿಶ್ವನಾಥ ಅವರು 15 ದಿನಗಳ ಹಿಂದೆ ಕಲಬುರಗಿಗೆ ವರ್ಗವಾಗಿ ಬಂದಿದ್ದರು. ಈ ಮುಂಚೆ ದಾವಣಗೆರೆ ಜಿಲ್ಲಾ ನ್ಯಾಯಾಲದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದರು.
ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ಪಕ್ಕದಲ್ಲಿರುವ ನ್ಯಾಯಾಧೀಶರ ವಸತಿ ಗೃಹದಲ್ಲಿ ಇವರು ಪತ್ನಿ, ಮಗುವಿನೊಂದಿಗೆ ವಾಸವಾಗಿ ದ್ದರು. ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮೃತರು ಪತ್ನಿ, 4 ವರ್ಷದ ಪುತ್ರಿಯನ್ನು ಅಗಲಿದ್ದಾರೆ.