ಕಲಬುರಗಿ: ಕಳೆದ 3 ತಿಂಗಳಿನಿಂದ ಸಂಬಳ ನೀಡದ ಕಾರಣಕ್ಕೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ (38) ಡೆತ್ ನೋಟ್ ಬರೆದಿಟ್ಟು ಗ್ರಂಥಾಲಯ ದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್ ನಲ್ಲಿ ಏನಿದೆ?
20 ವರ್ಷಗಳಿಂದ ಗ್ರಂಥಾಲಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಸಕಾಲಕ್ಕೆ ವೇತನ ಪಾವತಿಯಾಗದ ಕಾರಣಕ್ಕೆ ಸಾಲ ಮಾಡಿಕೊಂಡಿದ್ದೆ. ಸಾಲ ಪಾವತಿಸದೇ, ಮಕ್ಕಳ ಫೀಸ್ ಕಟ್ಟದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ,ವೇತನ ಕೇಳಲು ತೆರಳಿದಾಗ ಕೀಳಾಗಿ ಕಾಣುತ್ತಿದ್ದರು. ಸಂಬಂಧಿಸಿದ ಅಧಿಕಾರಿಗಳ ಕೈ, ಕಾಲು ಮುಗಿದರೂ ಕರುಣೆ ಬರಲಿಲ್ಲ. ನನ್ನ ಪರಿಸ್ಥಿತಿ ಬೇರೆ ಗ್ರಂಥಪಾಲಕರಿಗೆ ಬರಬಾರದು. ಹೀಗಾಗಿ ಇಂತಹ ನಿರ್ಧಾರ ಮಾಡಿರುವೆ ‘ ಎಂದು ಭಾಗ್ಯವತಿ ಡೆತ್ ನೋಟ್ನಲ್ಲಿ ಬರೆದಿದ್ದಾರೆ.