ವಿಶಾಖಪಟ್ಟಣಂ : ಅಪಾರ್ಟ್‌ಮೆಂಟ್‌ನಿಂದ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.
ವೆಂಕಟೇಶ್ವರ ಕಾಲೋನಿಯಲ್ಲಿ ಅಪಾರ್ಟ್‌ಮೆಂಟ್ ಮೇಲಿಂದ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರ ತಿಳಿದ ಗಜುವಾಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ. ಮೃತರನ್ನು ಪಿಲ್ಲಿ ದುರ್ಗಾರಾವ್ ಮತ್ತು ಸಾಯಿ ಸುಶ್ಮಿತಾ ಎಂದು ಗಾಜುವಾಕ ಪೊಲೀಸರು ಗುರುತಿಸಿದ್ದಾರೆ.
ಇಬ್ಬರೂ ಅಮಲಾಪುರಕ್ಕೆ ಸೇರಿದವರು ಎಂದು ಗುರುತಿಸಿದ್ದಾರೆ. ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಹಾರಿ ಈ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಜುವಾಕ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಪ್ರೇಮಿಗಳು ಎಂದು ಪೊಲೀಸರು ಪ್ರಾಥಮಿಕ ಮೌಲ್ಯಮಾಪನಕ್ಕೆ ಬಂದಿದ್ದಾರೆ. ಈ ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.