ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಮಾದಾವರದ ಮೈದಾನದಲ್ಲಿ ಯುವಕನ ಶವ ಪತ್ತೆಯಾಗಿದೆ.
ಮಾದಾವರದ ಮೈದಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಸುಮಾರು 30 ವರ್ಷದ ಯುವಕನ ಶವ ಪತ್ತೆಯಾಗಿದೆ. ಸ್ಥಳೀಯರು ತಕ್ಷಣ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.








