ಬೆಂಗಳೂರು : ರಾಜ್ಯದಲ್ಲಿ ರಮ್ಮಿ ಆಟದ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗದಗ ನಗರದ ಹೋಟೆಲ್ ವೊಂದರಲ್ಲಿ ಜಗದೀಶ್ ಹಳೇಮನೆ (37) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಗದೀಶ್ ಶಿರಹಟ್ಟಿ ಮೂಲದವರು ಎಂದು ಗುರುತಿಸಲಾಗಿದ್ದು, ಸಾವಿಗೂ ಮುನ್ನ ಡೆತ್ ನೋಟ್ ಸಹ ಬರೆದಿಟ್ಟಿದ್ದಾರೆ. ರಾಜ್ಯದಲ್ಲಿ ಆನ್ ಲೈನ್ ರಮ್ಮಿ ಗೇಮ್ ನಿಷೇಧ ಮಾಡಬೇಕು ಎಂದು ಡೆತ್ ನೋಟ್ ನಲ್ಲಿ ಬರೆದು ಸೂಸೈಡ್ ಮಾಡಿಕೊಂಡಿದ್ದಾರೆ.
ಜಗದೀಶ್ ಶಿರಹಟ್ಟಿಯಲ್ಲಿ ಪಾತ್ರೆ ವ್ಯಾಪಾರ ಮಾಡುತ್ತಿದ್ದರು. ಆನ್ ಲೈನ್ ರಮ್ಮಿ ಗೇಮ್ ನಿಂದ ಹಣ ಕಳೆದುಕೊಂಡು ಖಿನ್ನತೆಗೆ ಜಾರಿದ್ದರು. ಡಿಸೆಂಬರ್ 1 ರಂದು ಗದಗದ ಹೋಟೆಲ್ ನಲ್ಲಿ ನೇಣಿಗೆ ಶರಣಾಗಿದ್ದರು. ಡೆತ್ ನೋಟ್ ನಲ್ಲಿ ಆನ್ ಲೈನ್ ರಮ್ಮಿ ಬಂದ್ ಮಾಡುವಂತೆ ಉಲ್ಲೇಖಿಸಿದ್ದಾರೆ.