ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಜಾನುವಾರುಗಳಿಗೆ ಮೇವು ತರಲು ಕಾಡಿಗೆ ಹೋಗಿ ಮರ ಹತ್ತಿ ಸೊಪ್ಪು ಕಡಿಯುತ್ತಿರುವಾಗ ಕಡಿದ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಉಳ್ಳೂರು ಬ್ರಾಹ್ಮಣ ಮಂಚಾಲೆ ಗ್ರಾಮದ ನಿವಾಸಿ ಹೇಮಂತ್ (27) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಹೇಮಂತ್ ಅವರು ಫೆ.14ರಂದು ಬಾಳೆಗುಂಡಿಯ ಕಾಡಿನಲ್ಲಿ ಮರ ಹತ್ತಿ ಸೊಪ್ಪು ಕಡಿಯುತ್ತಿರುವಾಗ, ಆಕಸ್ಮಿಕವಾಗಿ ಮರದ ರೆಂಬೆ ಮರ್ಮಾಂಗಕ್ಕೆ ಹೊಡೆದು ಆಯತಪ್ಪಿ ಮರದಿಂದ ಕೆಳಗೆ ಬಿದ್ದಿದ್ದು, ಈ ವೇಳೆ ದಾರಿ ಹೋಕರಿಂದ ವಿಷಯ ತಿಳಿದು ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸುವ ವೇಳೆ ಹೇಮಂತ್ ಮೃತಪಟ್ಟಿದ್ದಾರೆ.








