ಮೈಸೂರು : ಮೈಸೂರಿನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಹತ್ತಿ ಮೂರ್ತಿ ಬಾಯಿಗೆ ಸಿಗರೇಟ್ ಇಟ್ಟು ವ್ಯಕ್ತಿಯೊಬ್ಬ ಹುಚ್ಚಾಟ ಮೆರೆದಿರುವ ಘಟನೆ ನಡೆದಿದೆ.
ಹೌದು, ಇಂದು ಮೈಸೂರಿನ ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಮೇಲೆ ಹತ್ತಿ ಕುಳಿತಿದ್ದ ವ್ಯಕ್ತಿ ಪ್ರತಿಮೆಯ ಬಾಯಿಗೆ ಸಿಗರೇಟ್ ಇಟ್ಟು ವಿಕೃತಿ ಮೆರೆದಿದ್ದಾನೆ. ವ್ಯಕ್ತಿಯ ಹುಚ್ಚಾಟಕ್ಕೆ ಸಾರ್ವಜನಿಕರು ಗಾಬರಿಯಾಗಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದಂತೆ ವ್ಯಕ್ತಿ ಎಸ್ಕೇಪ್ ಆಗಿದ್ದಾನೆ.
ಸದ್ಯ ವ್ಯಕ್ತಿಯ ಹುಚ್ಚಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪರಾರಿಯಾಗಿರುವ ವ್ಯಕ್ತಿಯ ಪತ್ತೆಗಾಗಿ ದೇವರಾಜ ಠಾಣೆ ಪೊಲಿಸರು ಹುಡುಕಾಟ ನಡೆಸಿದ್ದಾರೆ.