ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕುಡಿಯವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ಆರೋಪ ಕೇಳಿ ಬಂದಿದ್ದು, ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ತವಗಾ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗೆ ಕಿಡಿಗೇಡಿಗಳು ವಿಷ ಬೆರೆಸಿರುವ ಶಂಕೆ ವ್ಯಕ್ತವಾಗಿದ್ದು, ಕಿಡಿಗೇಡಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ನಿನ್ನೆ ಇಡೀ ಗ್ರಾಮಕ್ಕೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗಿತ್ತು. ಈ ವೇಳೆ ಕುಡಿಯುವ ನೀರಿನಲ್ಲಿ ನೊರೆ, ದುರ್ವಾಸನೆ ಬಂದಿದೆ. ಕೂಡಲೇ ಗ್ರಾಮಸ್ಥರು ಕುಡಿಯುವ ನೀರಿನ ಟ್ಯಾಂಕರ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಿಡಿಗೇಡಿಗಳು ನೀರಿನ ಟ್ಯಾಂಕ್ ನಲ್ಲಿ ವಿಷ ಬೆರೆಸಿರುವುದು ಪತ್ತೆಯಾಗಿದೆ. ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.