ದಾವಣಗೆರೆ : ದಾವಣಗೆರೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ ರೈಲ್ವೇ ಸೇತುವೆ ಬಳಿ ತಾಯಿ ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಬಳಿ ಇರುವ ತುಂಗಭದ್ರಾ ನದಿ ಸೇತುವೆ ಬಳಿ ಈ ಒಂದು ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳನ್ನ ಗಂಗನರಸಿ ಗ್ರಾಮದ ಸುವರ್ಣಮ್ಮ (65) ಮತ್ತು ಗೌರಮ್ಮ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯರಿಬ್ಬರ ರುಂಡ, ಮುಂಡ ಪ್ರತ್ಯೇಕವಾಗಿದ್ದು, ಅಂಗಾಂಗಗಳು ರಕ್ತಸಿಕ್ತವಾಗಿ ಛಿದ್ರವಾಗಿವೆ.
ಫೈನಾನ್ಸ್ ಸಾಲ ಕಟ್ಟಲಾಗದೆ ರೈಲಿಗೆ ತಲೆ ಕೊಟ್ಟು ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಸುವರ್ಣಮ್ಮ ಅವರ ಪತಿ ನಿಧನರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಿದ್ದು, ಮತ್ತೊಬ್ಬ ಪುತ್ರಿ ದಿವ್ಯಾಂಗರಾಗಿದ್ದರು. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.