ತುಮಕೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ತಾಪಮಾನ ಏರಿಕೆಯಿಂದ ಜನರು ಹೈರಾಣಾಗಿದ್ದಾರೆ ಇನ್ನು ಕೆಲವು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದ್ದು ಜನರು ದುಡ್ಡು ಉಸಿರು ಬಿಟ್ಟಿದ್ದಾರೆ ಈಗ ತುಮಕೂರಿನಲ್ಲಿ ಇದೆ ಬಿಸಿಲಿನ ತಾಪಮಾನದಿಂದ 32 ನವಿಲುಗಳು ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದೆ.
ಹೌದು ತುಮಕೂರಿನ ವಿವಿಧ ಭಾಗದಲ್ಲಿ 32 ನವಿಲುಗಳ ಸಾವನ್ನಪ್ಪಿದ್ದು, ಹೀಟ್‌ಸ್ಟ್ರೋಕ್‌ನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ತಾಲೂಕಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ, ಹುಲ್ಲೆನಹಳ್ಳಿ ಗ್ರಾಮದಲ್ಲಿ ಏ.16ರಿಂದ 21ರವರೆಗೆ ಒಟ್ಟು 32 ನವಿಲುಗಳ ಸಾವನ್ನಪ್ಪಿವೆ. ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿರಬಹುದು ಎನ್ನಲಾಗಿದೆ.








